 |
ಸಂಯುಕ್ತ ಸಹಕಾರಿಯ ಧ್ಯೇಯ ಮತ್ತು ಉದ್ದೇಶಗಳು ಈ ಕೆಳಗಿನಂತೆ ಇರತಕ್ಕದ್ದು: |
| |
1. |
ಸಂಯುಕ್ತ ಸಹಕಾರಿಯ ಪ್ರಾಥಮಿಕ ಉದ್ದೇಶವು ಕಾಯ್ದೆಯ ೫೩.೭ ನೇ ಕಲಂನಲ್ಲಿ ಸೂಚಿಸಿರುವ ಈ ಕೆಳಕಂಡ ಜವಾಬ್ದಾರಿಗಳನ್ನು ನಿರ್ವಹಿಸುವುದು. |
 |
| |
2. |
ಸಹಕಾರಿಗಳನ್ನು ಪ್ರವರ್ತಿಸುವುದು, ಸಂಘಟಿಸುವುದು ಹಾಗೂ ಈ ಉದ್ದೇಶಕ್ಕಾಗಿ ಮಾದರಿ ಉಪವಿಧಿಗಳನ್ನು ರಚಿಸುವುದು, ಹಾಗೂ ಸಹಕಾರಿ ತತ್ವಗಳಿಗನುಸಾರವಾಗಿ ಸಹಕಾರಿಗಳಿಗಾಗಿ ವಿವಿಧ ಕಾರ್ಯನೀತಿಯನ್ನು ರಚಿಸಲು ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸುವುದು. |
 |
| |
3. |
ಸಹಕಾರ ತರಬೇತಿ, ಶಿಕ್ಷಣ ಹಾಗೂ ತಿಳುವಳಿಕೆ ನೀಡುವುದು ಮತ್ತು ಸಹಕಾರ ತತ್ವಗಳನ್ನು ಪ್ರಚಾರ ಮಾಡುವುದು. |
 |
| |
4. |
ಸಂಶೋಧನೆ ಹಾಗೂ ಮೌಲ್ಯಮಾಪನವನ್ನು ಕೈಗೊಳ್ಳುವುದು ಮತ್ತು ಸದಸ್ಯ ಸಹಕಾರಿಗಳಿಗಾಗಿ ಯಥಾದೃಷ್ಟಿ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸಲು ನೆರವಾಗುವುದು. |
 |
| |
5. |
ಸದಸ್ಯ ಸಹಕಾರಿಗಳ ನಡುವೆ ಸೌಹಾರ್ದ ಸಂಬಂಧವನ್ನು ಕಲ್ಪಿಸುವುದು. |
 |
| |
6. |
ಅನರ್ಹಗೊಂಡ ಒಂದು ಸಹಕಾರಿಯ ನಿರ್ದೇಶಕನನ್ನು ತೆಗೆದು ಹಾಕುವುದು. |
 |
| |
7. |
ಅಗತ್ಯವಿರುವಾಗ ಸದಸ್ಯ ಸಹಕಾರಿಗಳ ಮಂಡಳಿ ಸಭೆಗಳಲ್ಲಿ ಭಾಗವಹಿಸುವುದೂ ಸೇರಿದಂತೆ ಸದಸ್ಯ ಸಹಕಾರಿಗಳಿಗೆ ವ್ಯವಸ್ಥಾಪನಾ ಅಭಿವೃದ್ಧಿ ಸೇವೆಗಳನ್ನು ಕಲ್ಪಿಸುವುದು. |
 |
| |
8. |
ಸದಸ್ಯ ಸಹಕಾರಿಗಳಿಗೆ ನೀತಿ ಸಂಹಿತೆಯನ್ನು ರೂಪಿಸುವುದು. |
 |
| |
9. |
ಸದಸ್ಯ ಸಹಕಾರಿಗಳಿಗೆ ಆರ್ಥಿಕ ಸಬಲತೆಯ ಮಾನದಂಡಗಳನ್ನು ರೂಪಿಸುವುದು. |
 |
| |
10. |
ಸದಸ್ಯ ಸಹಕಾರಿಗಳಿಗೆ ಕಾನೂನು ನೆರವು ಹಾಗೂ ಸಲಹೆ ಸೂಚನೆ ಒದಗಿಸುವುದು. |
 |
| |
11. |
ಸದಸ್ಯ ಸಹಕಾರಿಗಳ ಅಗತ್ಯದ ಮೇರೆಗೆ ಯಾವುದೇ ಇತರ ಸೇವೆಗಳನ್ನು ಒದಗಿಸುವುದು. |
 |
| |
12 |
ಹೊಸ ರೂಪದ ಸಹಕಾರಿ ಉದ್ದಿಮೆಗಳನ್ನು ಉತ್ತೇಜಿಸುವುದು. |
 |
| |
13. |
ಸಹಕಾರಿ ಶಿಕ್ಷಣ ನಿಧಿಯನ್ನು ರಚಿಸಿ ನಿರ್ವಹಿಸುವುದು. |
 |
| |
14. |
ಸಹಕಾರಿ ವಿಚಾರಧಾರೆಯನ್ನು ಅನ್ವಯಿಸುವಂತೆ ಪ್ರಾಯೋಗಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು. |
 |
| |
15. |
ಸಹಕಾರಿಗಳ ಪರವಾಗಿ ಮತ್ತು ಸಹಕಾರಿಗಳ ಮಧ್ಯೆ ಪರಸ್ಪರ ಸಂಪರ್ಕ ಕಲ್ಪಿಸುವುದು. |
 |
| |
16. |
ಸಹಕಾರಿಗಳ ಅಂಕಿ-ಅಂಶಗಳ ಬ್ಯಾಂಕಿನಂತೆ ವರ್ತಿಸುವುದು. |
 |
| |
17. |
ಸದಸ್ಯ ಸಹಕಾರಿಗಳ ಹಿತಾಸಕ್ತಿಯನ್ನು ಪ್ರತಿನಿಧಿಸುವುದು. |
 |
| |
18. |
ಗೊತ್ತುಪಡಿಸಿದ ಅವಧಿಯೊಳಗಾಗಿ ಅದರ ಸದಸ್ಯ ಸಹಕಾರಿಗಳ ಲೆಕ್ಕ ಪರಿಶೋಧನೆ, ಚುನಾವಣೆಗಳು, ಸಾಮಾನ್ಯ ಸಭೆಗಳು ನಡೆಯುವುದನ್ನು ಖಚಿತಪಡಿಸಿಕೊಳ್ಳುವುದು. |
 |
| |
19. |
ಸದಸ್ಯ ಸಹಕಾರಿಗಳ ಪರವಾಗಿ ವ್ಯವಹಾರ ಹಾಗೂ ಸೇವೆಗಳನ್ನು ಕೈಗೊಳ್ಳುವುದು. |
 |
| |
20. |
ಕಾಯ್ದೆ ಕಲಂ ೩೦.೨ ರಡಿಯಲ್ಲಿ ಒಂದು ಸದಸ್ಯ ಸಹಕಾರಿಯು ನಡೆಸಲು ತಪ್ಪಿದ ವಿಶೇಷ ಸಾಮಾನ್ಯ ಸಭೆಯನ್ನು ನಡೆಸುವುದು. |
 |
| |
21. |
ಲೆಕ್ಕ ಪರಿಶೋಧಕರ ಹಾಗೂ ಚಾರ್ಟೆರ್ಡ್ ಅಕೌಂಟೆಂಟರ ಒಂದು ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿಗಾಗಿ ಅದನ್ನು ಸದಸ್ಯ ಸಹಕಾರಿಗಳಿಗೆ ಕಳಿಸುವುದು. |
 |
| |
22. |
ಕಾಯ್ದೆ ಕಲಂ ೩೫ ರಡಿ ವಿಚಾರಣೆ ನಡೆಸುವುದು ಅಥವಾ ವಿಚಾರಣೆ ನಡೆಸುವಂತೆ ಮಾಡುವುದು. |
 |
| |
23. |
ಸದಸ್ಯ ಸಹಕಾರಿಗಳ ಪರಿವೀಕ್ಷಣೆ, ಸಮಾಪನೆ ಹಾಗೂ ಮಂಡಳಿಯ ರದ್ದತಿಗೆ ಅಧಿಕಾರ ಹೊಂದಿರುವುದು. |
 |
| |
24. |
ಕಾಯ್ದೆಯ ೬೭ನೇ ಕಲಂನಲ್ಲಿ ತಿಳಿಸಿರುವ ಸಹಕಾರಿ ತತ್ವಗಳನ್ನು ಪ್ರಚುರಪಡಿಸುವುದು ಮತ್ತು ಸದಸ್ಯ ಸಹಕಾರಿಗಳಿಗೆ ಅನ್ವಯಗೊಳಿಸುವುದು. |
 |
| |
25. |
ಕಾಯ್ದೆಯ ೧೦.೨.೨೧ ನೇ ಕಲಂನಡಿ ತಿಳಿಸಿರುವ ಸಹಕಾರಿ ಶಿಕ್ಷಣ ನಿಧಿಯನ್ನು ನಿರ್ವಹಿಸುವುದು ಹಾಗೂ ಕಲ್ಯಾಣ ನಿಧಿಯನ್ನು ನಿರ್ವಹಿಸಲು ಸದಸ್ಯ ಸಹಕಾರಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡುವುದು. |
 |
| |
26. |
ಕಾಯ್ದೆಯ ೬೨.೨ನೇ ಕಲಂನಡಿ ತಿಳಿಸಿರುವ ಸಂಯುಕ್ತ ಸಹಕಾರಿಯ ನಿಧಿಯನ್ನು ರಚಿಸಿ ನಿರ್ವಹಿಸುವುದು. |
 |
| |
27. |
ಇತರೆ ರಾಜ್ಯಗಳಲ್ಲಿರುವ ಸಂಯುಕ್ತ ಸಹಕಾರಿಗಳೊಂದಿಗೆ ಮತ್ತು ಇತರ ಸಂಸ್ಥೆಗಳೊಂದಿಗೆ ಸಂಪರ್ಕಿಸುವುದು, ಸಹಯೋಗಿಸುವುದು ಮತ್ತು ಸೂಕ್ತ ರೀತಿಯಲ್ಲಿ ಸಹಭಾಗಿತ್ವವನ್ನು ನಿರ್ವಹಿಸುವುದು. |
 |
| |
28. |
ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಶೋಧನೆ, ಚರ್ಚಾಗೋಷ್ಠಿಗಳು, ಪ್ರಕಟಣಾ ಕಾರ್ಯ, ಮುಂತಾದ ಚಟುವಟಿಕೆಗಳಿಗೆ ಸಹಕರಿಸುವುದು ಮತ್ತು ಪಾಲ್ಗೊಳ್ಳುವುದು. |
 |
| |
29. |
ಸದಸ್ಯ ಸಂಸ್ಥೆಯ ಚಟುವಟಿಕೆಗಳ ಮೇಲೆ ನಿಯಂತ್ರಣ ಅಥವಾ ನಿರ್ದೇಶನದ ಅಧಿಕಾರವುಳ್ಳ ಅಧಿಕಾರಿಗಳ ಮತ್ತು ಸಂಸ್ಥೆಗಳೊಡನೆ ಸಂಪರ್ಕಿಸುವುದು ಮತ್ತು ಸಹಯೋಗಿಸುವುದು. |
 |
| |
30. |
ಮೇಲ್ಕಂಡ ಉದ್ದೇಶಗಳಿಗೆ ಅನುಗುಣವಾಗುವಂತೆ ಎಲ್ಲಾ ಸೂಕ್ತ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದು. |